ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಶೀಳನೆರೆ ಹೋಬಳಿಯ ಮರಡಹಳ್ಳಿ ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ಸಿಂಗನಹಳ್ಳಿ ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರ ಅಕ್ಕಿಹೆಬ್ಬಾಳು ರಘು,ದಿಶಾ ಸಮಿತಿ ಸದಸ್ಯ ನರಸನಾಯಕ್,ಗುತ್ತಿಗೆದಾರ ಜೈನಹಳ್ಳಿ ದಿನೇಶ್, ಸಂತೋಷ್,ಪ್ರವೀಣ್, ಜೀವನ್,ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.






















