ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ಜನ್ಮದಿನವನ್ನು ಆಚರಣೆ ಮಾಡಲಾಯಿತು. ಮುಖಂಡರಾದ ಬಾಬುರಾವ ಜಹಾಗಿರದಾರ, ಭೀಮರಾವ ಟಿ.ಟಿ., ಪರಮೇಶ್ವರ ಖಾನಾಪೂರ, ಚಂದ್ರಿಕಾ ಪರಮೇಶ್ವರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ ಸೇರಿದಂತೆ ವiತ್ತಿತರರು ಇದ್ದರು.