ಕಲಬುರಗಿ: ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಪರಿವರ್ತನೆಯ ಹರಿಕಾರರಾದ ಡಿ.ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆಯನ್ನು ಪಬ್ಲಿಕ್ ಗಾರ್ಡನ್ ಹತ್ತಿರವಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷೆ ಚಂದ್ರಕಾ ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು ಭಾಗವಹಿಸಿದರು.