ಕಲಬುರಗಿ: ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಪ್ರಾಂಗಣದಲ್ಲಿ ವಿಶ್ವ ಸೊಳ್ಳೆ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಸಿದ್ದು ಪಾಟೀಲ್ ಭಿತ್ತಿ ಪತ್ರ ಬಿಡುಗಡೆ ಗೊಳಿಸಿ ಚಾಲನೆ ನೀಡಿದರು. ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ ಸಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೀಟಶಾಸ್ತ್ರ ತಜ್ಞ ಚಾಮರಾಜ ದೊಡ್ಡಮನಿ, ಕಾರ್ಣಿಕ ಕೋರೆ, ಅರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಇತರರು ಇದ್ದರು.