
ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಕಳೆದ ೩೫ ವರ್ಷಗಳ ನಿರಂತರ ಹೋರಾಟದ ಫಲವಾಗಿ ಸಾಮಾಜಿಕ ನ್ಯಾಯ ದೊರಕಿದ್ದು, ಈ ಹೋರಾಟದಲ್ಲಿ ಅವಿರತವಾಗಿ ಶ್ರಮಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪನವರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಎನ್. ವಿಜಯಕುಮಾರ್ ಸಿಂಹ, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್.ಸಿ. ವಿಭಾಗದ ಜಿಲ್ಲಾಧ್ಯಕ್ಷ ಕೋಗಿಲು ವೆಂಕಟೇಶ್‌ರವರು ಶಾಲು ಹೊದಿಸಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.