ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಂದು ಹೆಬ್ಬಾಳದ ರಾಧಾಕೃಷ್ಣ ವಾರ್ಡ್ ನ ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂತನ ಕೊಳವೆಬಾವಿ ಕೊರೆಯುವ ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳು ಇದ್ದರು.