
ಕರ್ನಾಟಕ ವಿಧಾನಪರಿಷತ್ ಶಾಸಕ, ಕರ್ನಾಟಕ ಆರ್ಯ ವೈಶ್ಯ ಮಹಾಮಂಡಳಿಯ ರಾಜ್ಯಾಧ್ಯಕ್ಷ ಡಾ. ಟಿ.ಎ. ಶರವಣರವರು ತಿರುಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ನಾಡಿನ ಸಮಗ್ರ ಕಲ್ಯಾಣಕ್ಕಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ರಾಜ್ಯದ ಜನತೆ ಆರೋಗ್ಯವಾಗಿರಲಿ, ಸಮೃದ್ಧಿ, ಶಾಂತಿ, ಸೌಹಾರ್ದತೆ ಹಾಗೂ ಪ್ರಗತಿ ಸದಾ ವೃದ್ಧಿಸಲಿ ಎಂದು ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು.