ಕಲಬುರಗಿ; ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ ಸಮರ್ಪಕವಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘಟನೆ ಜಿಲ್ಲಾ ಅಧ್ಯಕ್ಷ ಗಣಪತರಾವ ಕೆ.ಮಾನೆ, ಕಾರ್ಯದರ್ಶಿ ಮಹೇಶ ಎಸ್.ಬಿ., ಭಾಗಣ್ಣ ಬುಕ್ಕಾ, ಭೀಮು ಆಂದೋಲಾ, ನೀಲಕಂಠ ಹುಲಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.