ಕಲಬುರಗಿ: ಸರಕಾರಿ/ಅರೆ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 15ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರವಿವಾರ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಶಾಸಕ ಅಲ್ಲಮಪ್ರಭು ಪಾಟೀಲ, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಪ್ರಮೀಳಾ ಎಂ.ಕೆ., ಗುಲ¨ರ್ಗಾ ಮಹಿಳಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷೆ ಶೈಲಜಾ ತಪಲಿ, ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸಂಘದ ಅಧ್ಯಕ್ಷ ಡಾ.ಬಿ.ಎಸ್.ದೇಸಾಯಿ ಸೇರಿದಂತೆ ಮತ್ತಿತರರು ಇದ್ದರು.