
ಕಲಬುರಗಿ: ಭಕ್ತರ ಶ್ರದ್ಧಾ ಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಚಾರ ಮಾಡುವ ದುಷ್ಟಶಕ್ತಿಗಳನ್ನು ಮಟ್ಟಹಾಕುವಲ್ಲಿ ವಿಫಲವಾಗಿರುವ ಸರ್ಕಾರದ ದೋರಣೆಯನ್ನು ಖಂಡಿಸಿ ಬಿಜೆಪಿ ಕರೆ ನೀಡಿದ “ಧರ್ಮದ ಉಳಿವಿಗಾಗಿ ಧರ್ಮ ಯುದ್ದ”ದ ಹಿನ್ನಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ ಪ್ರತಿಭಟನೆ ಕೈಗೊಳ್ಳಲಾಯಿತು. ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಅಮರನಾಥ ಪಾಟೀಲ, ದಯಾಘಾನ ಧಾರವಾಡಕರ, ರವಿ ಕ್ರಾಂತಿಕಾರ, ಶಿವಯೋಗಿ ನಾಗನಹಳ್ಳಿ, ದೇವಿಂದ್ರ ದೇಸಾಯಿ ಕಲ್ಲೂರ, ಅನಿಲಕುಮಾರ ಡಾಂಗೆ, ಮಹಾದೇವ ಬೆಳಮಗಿ, ಶ್ರೀನಿವಾಸ ದೇಸಾಯಿ, ಸಚಿನ ಕಡಗಂಚಿ, ಮಹೇಶ ರೆಡ್ಡಿ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.