ನಗರದ ಎರಡೆತ್ತಿನ ಮಠದಲ್ಲಿ ನಡೆದ ಶ್ರಾವಣ ಮಾಸದ ಕಾರ್ಯಕ್ರಮದಲ್ಲಿ ಕಳೆದ 48 ವರ್ಷಗಳಿಂದ ನಿರಂತರವಾಗಿ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡು, ಅನೇಕ ಸಾಮಾಜಿಕ, ಶೈಕ್ಷಣಿಕ ಕಾರ್ಯದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸುತ್ತ ಬಂದಿರುವ ಹಿರಿಯ ನ್ಯಾಯವಾದಿ, ಹುಬ್ಬಳ್ಳಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಸಿ. ಆರ್ ಪಾಟೀಲ ಅವರನ್ನು ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸತ್ಕರಿಸಿ ಆಶೀರ್ವದಿಸಿದರು.