ಕಲಬುರಗಿ: ನಗರದ ಪೂಜ್ಯ ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಇಂದು ಆಯೋಜಿಸಿದ್ದ ಬಸವ ಸಂಸ್ಕøತಿ ಅಭಿಯಾನದ ಸಾನಿಧ್ಯ ವಹಿಸಿ ಭಾಲ್ಕಿ ಸಂಸ್ಥಾನ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಮಾತನಾಡಿದರು. ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಜಗದ್ಗುರು ಡಾ.ಗಂಗಾ ಮಾತಾಜಿಯವರು ಸೇರಿದಂತೆ ವಿವಿಧ ಮಠಾಧೀಶರು, ಶಾಸಕ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಶರಣಬಸವ ವಿವಿ ಕುಲಪತಿ ಡಾ.ಅನಿಲಕುಮಾರ ಬಿಡವೆ, ಬಸವ ಸಂಸ್ಕøತಿ ಅಭಿಯಾನದ ಅಧ್ಯಕ್ಷ ಅರುಣಕುಮಾರ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.