
ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಡಾ. ವೀರಪ್ಪ ಸಂಕನೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಶಾಖಾಶಿವಯೋಗ ಮಂದಿರದ ನಿಡಗುಂದಿಕೊಪ್ಪ ಮಠ ಶ್ರೀ ಮ.ನಿ.ಪ್ರ. ಚನ್ನಬಸವ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು. ಎಸ್.ವಿ. ಸಂಕನೂರ ವಿಧಾನ ಪರಿಷತ್ ಸದಸ್ಯರು, ಹಿರಿಯ ಕಾಂಗ್ರೆಸ್ ಮುಖಂಡರಾದ ವ್ಹಿ.ಆರ್. ಗುಡಿಸಾಗರ ನಿಡಗುಂದಿ ಗ್ರಾಮದ ಮುಖಂಡರು, ಶಾಲಾ ಶಿಕ್ಷಕ ವೃಂದದವರು ಇದ್ದರು.