
ಕಲಬುರಗಿ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ತೆಗೆದುಕೊಂಡ ಸಚಿವ ಸಂಪುಟದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ಇಂದು ಬಂಜಾರ,ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಜಗತ್ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಬಂಜಾರ,ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ವಿವಿಧ ಪೂಜ್ಯರು ಸೇರಿದಂತೆ ಸಂಘದ ರಾಜ್ಯಾಧ್ಯಕ್ಷ ಶಾಮರಾವ ಪವಾರ,ಕಾರ್ಯದರ್ಶಿ ತಿಪ್ಪಣ್ಣ ವಡೆಯರಾಜ,ಸುನೀಲ ವಲ್ಲ್ಯಾಪುರೆ,ಬಾಬುರಾವ ಚವ್ಹಾಣ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡರು.