ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟದ ಘಟನೆಯಲ್ಲಿ ಬಂಧಿಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರಿಗೆ ಬೆಂ. ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಹರುವೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಸಿ ಎಸ್. ಮನೋಹರ್ ಮನವಿ ಸಲ್ಲಿಸಿದರು. ಮುಖಂಡರಾದ ಪುಟ್ಟರಾಜು ಮತ್ತಿತರರು ಇದ್ದಾರೆ.























