ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ರಕ್ತದಾನ ಮಾಡಿದರು. ಶಾಸಕ ಉದಯ ಗರುಡಾಚಾರ್, ಪತ್ನಿ ಮೇದಿನಿ ಉದಯಗರುಡಾಚಾರ್, ಮಾಜಿ ಪಾಲಿಕೆ ಸದಸ್ಯರುಗಳಾದ ಪಿ. ಧನರಾಜ್, ಕವಿತಾ ಜೈನ್, ರತ್ಮಮ್ಮ ಅವರುಗಳು ಉಪಸ್ಥಿತರಿದ್ದರು.