
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯರಗಟ್ಟಿ ಸರ್ಕಾರಿ ಪ್ರೌಢಶಾಲೆ ಯಲ್ಲಿ 10ನೇ ತರಗತಿಯ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪಾಠ ಆಧಾರಿತ ಮೌಲ್ಯಾಂಕಣದ ಐಃಂ ಆಧಾರಿತ ವಿಜ್ಞಾನ ವಿಷಯದ ಪುಸ್ತಕಗಳನ್ನು ಉಚಿತವಾಗಿ ವಿಜ್ಞಾನ ವಿಷಯ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾದ ಪಿ .ಆರ್ ವಡೆಯರ ನೀಡಿದರು. ದಸರಾ ರಜೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಸಮರ್ಪಕವಾಗಿ ಬಳಸಿಕೊಂಡು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವಂತೆ ಹೇಳಿದರು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸರ್ವ ಸಿಬ್ಬಂದಿ ಬಳಗ ಉಪಸ್ಥಿತರಿದ್ದರು.