
ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ *ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕಾರ್ಮಿಕ ಮತ್ತು ಉದ್ಯೋಗದ ರಾಜ್ಯ ಸಚಿವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯರು ಹಾಗೂ ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ಅಧ್ಯಕ್ಷರಾದ ಕುಮಾರಿ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯತೀಶ್.ಆರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.