ನವಲಗುಂದ: ತಾಲ್ಲೂಕಿನ ಗುಮ್ಮ ಗೋಳ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಶಿವಾನಂದ ಆಚಮಟ್ಟಿ ಯವರು ಏಳು ದಿನಗಳಲ್ಲಿಯೇ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ನಿಗದಿತ ಅವಧಿಗೂ ಮೊದಲೇ ೯೧ ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ ಗಮನ ಸೆಳೆದಿದ್ದಾರೆ. ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್ ಸುಧೀರ ಸಾಹುಕಾರ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅವರ ಕಾರ್ಯವನ್ನು ಪ್ರಶಂಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಗೀರ ದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ, ತಾಲ್ಲೂಕು ಹಿಂದುಳಿದ ವರ್ಗ ಗಳ ಕಲ್ಯಾಣ ಅಧಿಕಾರಿ ಗಣಾಚಾರಿ ಇದ್ದರು.