
ಕಲಬುರಗಿ: ಹಾಸ್ಟೆಲ್‍ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಬೀದರ್ ಮಾದರಿಯಲ್ಲಿ ಸಹಕಾರ ಸಂಘ ರಚಿಸುವ ಸರ್ಕಾರದ ತೀರ್ಮಾನವನ್ನು ಶೀಘ್ರದಲ್ಲಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಕಾಶೀನಾಥ ಬಂಡಿ, ಮೇಘರಾಜ ಕಠಾರೆ, ನಾಗರತ್ನ ಮದನಕರ, ಕಲ್ಯಾಣಿ ಪೂಜಾರಿ, ಬಾಬು ಹೊಸಮನಿ, ನರಸಮ್ಮ ಕೊಂಡಂಪಳ್ಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.