ನಗರದ ಬಿಟಿಎಂ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಂದ್ರನಗರ ಬಡಾವಣೆಯ ನಾಗರಿಕರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಜಾತಿ ಸಮೀಕ್ಷೆ ಬಗ್ಗೆ ಅರಿವು ಮೂಡಿಸಲು ಆಗಮಿಸಿದ್ದ ಸಚಿವ ಕೆ.ಹೆಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ. ಚಂದ್ರಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಸಿಂಹ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಿಬಿಎಂಪಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ್, ಬಿಬಿಎಂಪಿ ಪೌರ ಕಾರ್ಮಿಕರ ನಾಲ್ಕನೇ ದರ್ಜೆ ನೌಕರರ ಸಂಘದ ಅಧ್ಯಕ್ಷ ಮುತ್ಯಾಲು ಮತ್ತಿತರರು ಇದ್ದಾರೆ.