ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ನನ್ನು ಗಡೀಪಾರು ಮಾಡುವಂತೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ, ವಿವಿಧ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ವತಿಯಿಂದ ಬೀದರ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನ್ನಾನ ಸೇಠ್, ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಕೆ. ಪುಂಡಲೀಕರಾವ್, ಅನಿಲ್ ಕುಮಾರ್ ಬೇಲ್ದಾರ್, ಬಸವರಾಜ ಮಾಳಗೆ, ಶ್ರೀಕಾಂತಸ್ವಾಮಿ, ಫಯೀಮೊದಿನ, ಪಂಡಿತರಾವ್ ಚಿದ್ರಿ, ಮತ್ತಿತರರು ಭಾಗವಹಿಸಿದ್ದರು.