ಕಲಬುರಗಿ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಕೊಲೆ ಪ್ರಕರಣದ ಆರೋಪಿಗೆ ಕಠಿಣಶಿಕ್ಷೆಗೆ ಒಳಪಡಿಸಿ,ಬಾಲಕಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡುವಂತೆ ಆಗ್ರಹಿಸಿ ಇಂದು ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು,ಲಕ್ಷ್ಮೀಕಾಂತ ಸ್ವಾದಿ,ಸಂತೋಷ ಸೋನಾವಣೆ,ಚಿದಾನಂದ ಮಠಪತಿ ಸೇರಿದಂತೆ ಹಲವರು ಪಾಲ್ಗೊಂಡರು.