ಕಲಬುರಗಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕ ಸಿಬ್ಬಂದಿಗಳು ತಮಗೆ ವಹಿಸಿರುವ ಕೆಲಸ ಮುಗಿಸಿದ್ದರೂ ಅವರಿಗೆ ನಿಯಮ 12ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಿ ತೊಂದರೆ ಕೊಡುತ್ತಿರುವುದನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ, ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ ಹೂಗಾರ, ಜಿಲ್ಲಾ ಕಾರ್ಯದರ್ಶಿ ಜಮೀಲ್ ಇಮ್ರಾನ್ ಅಹ್ಮದ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.