ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಂಗಸಂಸ್ಥೆಯಾದ ರಾಜೀವ್ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅತ್ಯಂತ ಸಂಭ್ರದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರು ಶ್ರೀಮತಿ ವೀಣಾ ತುಪ್ಪದ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ಅವರ ಶೌರ್ಯ, ದೇಶಭಕ್ತಿ ಮತ್ತು ಮಹಿಳಾ ಶಕ್ತಿಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು ಶಾಲೆಯ ವಿದ್ಯಾರ್ಥಿನಿಯರು ರಾಣಿ ಚೆನ್ನಮ್ಮನ ವೇಷ ಧರಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು ಶಾಲೆಯ ಎಲ್ಲಾ ಶಿಕ್ಷಕ ವೃಂದವು ಉಪಸ್ಥಿತರಿದ್ದರು.