ಬಿಜೆಪಿ ಮತಗಳ್ಳತನ ವಿರುದ್ಧ ಇಂದು ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜನಾಕ್ರೋಶ ಆಂದೋಲನ ನಡೆಯಿತು. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಹಿಳಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಜಿ.ಪದ್ಮಾವತಿ, ಬೆಂ. ಪಶ್ಚಿಮ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್‌ಕುಮಾರ್, ಎಸ್ ಮನೋಹರ್ ಬ್ಲಾಕ್ ಅಧ್ಯಕ್ಷರುಗಳಾದ ನಾಗರಾಜ್, ಕೃಷ್ಣಮೂರ್ತಿ ಡಿಸಿಸಿ ಸದಸ್ಯರು, ವಾರ್ಡ್ ಅಧ್ಯಕ್ಷರು ಉಪಸ್ಥಿತರಿದ್ದರು.