
ಮಂಡ್ಯ,ಜೂ.೧೮-ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಭರ್ತಿಯತ್ತ ಸಾಗಿದೆ. ಜಲಾಶಯ ಭರ್ತಿಗೆ ಕೇವಲ ೧೧ ಅಡಿ ಮಾತ್ರ ಅಗತ್ಯವಿದೆ.
ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಬಿರುಸಾಗಿದೆ. ಇದರಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ ೨೯,೩೬೮ ಕ್ರೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಕಳೆದ ೨೪ ಗಂಟೆಗಳಲ್ಲಿ ಜಲಾಶಯದಲ್ಲಿ ೪ ಟಿಎಂಸಿ ನೀರು ಶೇಖರಣೆಯಾಗಿದೆ.
ಜಲಾಶಯದ ಮಟ್ಟ ೧೨೪.೮ ಅಡಿಗಳ ಗರಿಷ್ಠಮಟ್ಟ ಹೊಂದಿದ್ದು, ಈಗ ಜಲಾಶಯದಲ್ಲಿ ೧೧೩.೨೫ ಅಡಿಯಷ್ಟು ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಲು ಇನ್ನು ೧೧ ಅಡಿಗಳಷ್ಟೇ ಬಾಕಿ ಇದೆ. ೪೯,೪೫೨ ಟಿಎಂಸಿ ಗರಿಷ್ಠ ಸಾಮಾರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಪ್ರಸ್ತುತ ೩೫,೧೧೮ ಟಿಎಂಸಿಯಷ್ಟು ನೀರಿದೆ.
ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.