ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ನಾಡಿನ ಹಿರಿಯರಾದ ಕಸ್ತೂರಿ ಶಂಕರ್, ರಂಜಾನ್ ದರ್ಗಾ, ಕಾ.ತಾ. ಚಿಕ್ಕಣ್ಣ, ಶ್ರೀನಿವಾಸ.ಜಿ, ಕಪ್ಪಣ್ಣ ಅವರಿಗೆ ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಹಿತ್ಯ ಸೇವಾ ಪ್ರತಿಷ್ಠಾನ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಉಪಸ್ಥಿತರಿದ್ದರು.


























