ಕಲಬುರಗಿ: ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಿಂದುಗಡೆ ರಸ್ತೆಯಲ್ಲಿ ಒಳಚರಂಡಿ ತುಂಬಿ ರಸ್ತೆಯ ಮೇಲೆ ಕೊಳಚೆ ನೀರು ಹರಿದು ಗಬ್ಬು ವಾಸನೆಯನ್ನು ಹರಡುತ್ತಿದೆ.ಪಾದಚಾರಿಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಕೂಡಲೇ ಸಂಬಂಧ ಪಟ್ಟ ಇಲಾಖೆಯವರು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ



























