
ನಗರದ ಗಾಂಧಿನಗರದ ವೈ. ರಾಮಚಂದ್ರ ರಸ್ತೆಯ ಡಾ. ರಾಜ್‌ಕುಮಾರ್ ವೃತ್ತದಲ್ಲಿ ಕನ್ನಡ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಉದ್ಘಾಟಿಸಿದರು. ಕನ್ನಡ ಕರವೇ ರಾಜ್ಯಾಧ್ಯಕ್ಷ ಕೆ.ಸಿ. ಮೂರ್ತಿ, ಸಮತಾ ಸೈನಿಕ ದಳದ ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ, ಬಿಜೆಪಿ ಯುವ ಮುಖಂಡ ಸಪ್ತಗಿರಿ ಗೌಡ, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ.ವಿ. ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.





























