ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ಅವರು ಬೆಳಗಾವಿ ಜಿಲ್ಲೆಯ ಐತಿಹಾಸಿಕ ಶ್ರೀಕ್ಷೇತ್ರ ಕಲ್ಲೋಳಿ ಶ್ರೀ ಆಂಜೆನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತಮ್ಮ ಜನ್ಮದಿನವನ್ನು ಆಚರಿಸಿ ಕೊಂಡರು. ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ ಸಿಗಲಿ ಎಂದು ಪ್ರಾರ್ಥಿಸಿದರು. ಈ ವೇಳೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
























