
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರು ಬಳಕೆ ಕುರಿತ ರಾಷ್ಟ್ರೀಯ ಕಾರ್ಯಾಗಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ರವರು ಉದ್ಘಾಟಿಸಿದರು. ನಗರ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಎನ್‌ಐಟಿಐ ಆಯೋಗದ ಸದಸ್ಯ ಡಾ. ವಿನೋದ್ ಕೆ. ಪೌಲ್, ಐಎಎಸ್ ಅಧಿಕಾರಿ ಡಿ. ತಾರಾ, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮಪ್ರಸಾತ್ ಮನೋಹರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
























