
ನಿವೃತ್ತಿ ಹೊಂದಿದ ಸುಮಾರು ೨೦ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಗ್ರಾಚ್ಯುಟಿ ನೀಡದಿರುವುದನ್ನು ಖಂಡಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘಗಳ ಸಂಯುಕ್ತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
























