ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಳೆದ ಐದು ದಿನಗಳಿಂದ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನಡೆದಿರುವ ಪ್ರತಿಭಟನೆಗೆ ಶಿಗ್ಲಿ ಗ್ರಾಮದಲ್ಲಿ ನೂರಾರು ರೈತರು ಗ್ರಾಮ ಪಂಚಾಯಿತಿ ಮುಂದೆ ಮಹಾತ್ಮ ಗಾಂಧೀಜಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ರೈತ ಹೋರಾಟಗಾರರಿಗೆ ಬೆಂಬಲ ವ್ಯಕ್ತಪಡಿಸಿದರು.