ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ/ಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೀವ್ ಜಾನೆ ಅವರು ಜಿಮ್ಸ್ ಆಸ್ಪತ್ರೆಗೆ ದಾಖಲಾದ ರೋಗಿಗಳ ಆರೈಕೆಗೆ ಬಂದ 300 ಜನರಿಗೆ ಬ್ಲ್ಯಾಂಕೆಟ್ (ಹೊದಿಕೆ)ಗಳನ್ನು ವಿತರಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಪ್ಪ ಹೊಸಮನಿ ಇದ್ದರು.