ಕಲಬುರಗಿ: ನಗರದ ಸರಕಾರಿ ಮಹಾವಿದ್ಯಾಲಯ ( ಸ್ವಾಯತ್ತ)ದಲ್ಲಿಂದು ಉದ್ಯೋಗ ಮೇಳ -2025 ವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಎನ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಪ್ರೊ ಶೋಭಾ ಜಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಕಾರ್ಯನಿರ್ವಹಣಾ ನಿರ್ದೇಶಕಿ ಸುಮತಿ ಬಿ.ಎಸ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ ಶಿವಶರಣ ಗೊಳ್ಳೆ, ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.