ವೀರಶೈವ -ಲಿಂಗಾಯತ ಸಮಾಜದ ಮುಖಂಡರು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಗೌರವಾಧ್ಯಕ್ಷ ಬಿ.ಎಸ್. ಪರಮಶಿವಯ್ಯ ಅವರ ೮೬ನೇ ಜನ್ಮದಿನಾಚರಣೆಯನ್ನು ವಿಜಯನಗರ ಜಗಜ್ಯೋತಿ ಶ್ರೀ ಬಸವೇಶ್ವರ ಉಚಿತ ವಿದ್ಯಾರ್ಥಿನಿಲಯದ ಆವರಣದಲ್ಲಿ ಆಚರಿಸಲಾಯಿತು. ಮೇಲಣಗವಿ ಮಠಾಧ್ಯಕ್ಷ ಶಾಂತಮುನಿ ಶಿವಾಚಾರ್ಯ ಸ್ವಾಮಿಗಳು, ಬೇಲಿಮಠದ ಶಿವರುದ್ರ ಮಹಾಸ್ವಾಮಿಗಳು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಮಾಜಿ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್, ಗೌರವ ಕಾರ್ಯದರ್ಶಿ ಸಿ. ಸಿದ್ದಲಿಂಗಯ್ಯ, ಸಂಸ್ಥೆಯ ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು.