
ಕಲಬುರಗಿ: ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಸಿ2 ಪ್ಲಸ್ 50% ಪರ್ಸೆಂಟ್ ಸೇರಿಸಿ ಎಂಎಸ್‍ಪಿ ಬೆಂಬಲ ಬೆಲೆ ಕಾನುನು ಜಾರಿ ಮಾಡಬೇಕು ಮತ್ತು ಉಳ್ಳಾಗಡ್ಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಸಂಯುಕ್ತ-ಹೋರಾಟ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಮಹಾಂತಗೌಡ ನಂದಿಹಳ್ಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

























