ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ‘ಪರಿಸರಕ್ಕಾಗಿ ನಾವು’ ಸಂಘಟನೆ ಹಮ್ಮಿಕೊಂಡಿದ್ದ ‘ಸತ್ಯಾಗ್ರಹ’ದಲ್ಲಿ ನಿವೃತ್ತ ನ್ಯಾ. ಎನ್. ಸಂತೋಷ್ ಹೆಗಡೆ, ನಿವೃತ್ತ ನ್ಯಾ. ವಿ. ಗೋಪಾಲಗೌಡ, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಬಸವರಾಜೇಂದ್ರ ಸ್ವಾಮೀಜಿ, ಮಲ್ಲೇಶಸ್ವಾಮೀಜಿ, ಹಿರಿಯ ನಟ ಸುರೇಶ್ ಹೆಬ್ಳೀಕರ್, ಲೇಖಕ ನಾಗೇಶ್ ಹೆಗಡೆ, ರೈತ ಮುಖಂಡ ಕೆ.ಟಿ. ಗಂಗಾಧರ್, ಹಿರಿಯ ಪತ್ರಕರ್ತರಾದ ಜಾಣಗೆರೆ ವೆಂಕಟರಾಮಯ್ಯ, ಇಂದೂಧರ ಹೊನ್ನಾಪುರ, ಮತ್ತಿತರ ಮುಖಂಡರು ಭಾಗವಹಿಸಿದ್ದರು.