ಕಲಬುರಗಿ: ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮತ್ತು ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿ ಶಿವಸೇನಾ ಪಕ್ಷ-ಕರ್ನಾಟಕ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಮಾನವ ಸರಪಳಿ ರಚಿಸಿ ಪ್ರತಿಭಟನೆ ಮಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಅಧ್ಯಕ್ಷ ಗುರುಶಾಂತ ಟೆಂಗಳಿ, ಯುವ ಮೋರ್ಚಾ ಅಧ್ಯಕ್ಷ ರಾಕೇಶ ಜಮಾದಾರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.























