
ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿಂದು ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು,ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ ಅಯೋಜಿಸಲಾಯಿತು.ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿಗೌಡ ಹಾಗೂ ಇತರರಿದ್ದರು.
























