
ಮತದಾರರ ನೋಂದಣಾಧಿಕಾರಿಗಳು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಹಾಗೂ ಪ್ರಾದೇಶೀಕ ಆಯುಕ್ತರು ಬೆಳಗಾವಿ ವಿಭಾಗ ಬೆಳಗಾವಿ, ಹುಬ್ಬಳ್ಳಿ ನಗರದಲ್ಲಿರುವ ಮತಗಟ್ಟೆ ಸಂಖ್ಯೆ:24, 25 ಹಾಗೂ 26 ರಲ್ಲಿ ಮತದಾರರ ವಿಳಾಸಕ್ಕೆ ಭೇಟಿ ನೀಡಿ ಪರಿಶೀಲನೆಕೈಗೊಂಡರು. ನಂತರ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ಜರುಗಿಸಿ, ನಮೂನೆ-18ರಲ್ಲಿ ಸ್ವೀಕೃತವಾದ ಅರ್ಜಿಗಳ ಕುರಿತು ಮತದಾರರ ವಿಳಾಸದ ಬಗ್ಗೆ ಸಂಬಂಧಿಸಿದ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಳು ಸ್ವತಃ ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡಲು ಸೂಚಿಸಿದರು.
































