ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ನಗರದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅನಿಲಕುಮಾರ್ ಪಾಟೀಲ್, ಹುಧಾ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಪ್ ಹಳ್ಳೂರ, ಪಾಲಿಕೆ ಸದಸ್ಯ ಅರ್ಜುನ್ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಸದಾನಂದ ಡಂಗನವರ, ಗೌರಮ್ಮ ಬಲೋಗಿ, ಸರೋಜಾ ಹೂಗಾರ, ಡಿ.ಎಂ. ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.