
ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಇಲಾಖೆ ನೌಕರರ ವಾರ್ಷಿಕ ಕ್ರೀಡಾಕೂಟವನ್ನು ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಂ ಉದ್ಘಾಟಿಸಿದರು. ಡಿ.ಸಿ.ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ,ಅಪರ ಜಿಲ್ಲಾಧಿಕಾರಿ ರಾಯಪ್ಪ ಹಣಸಗಿ, ಕಲಬುರಗಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಸೇಡಂ ಆಯುಕ್ತರಾದ ಪ್ರಭು ರೆಡ್ಡಿ ಕಲ್ಬುರ್ಗಿಯ ಜಿಲ್ಲೆಯ ಎಲ್ಲಾ ತಾಲೂಕಿನ ಗ್ರೇಡ್-1, ಗ್ರೇಡ್-2 ತಹಶೀಲ್ದಾರರು ಹಾಗೂ ಅಧ್ಯಕ್ಷರು ಕಂದಾಯ ಇಲಾಖೆ ನೌಕರರ ಸಂಘದವರು ಇದ್ದರು.

























