ಕಲಬುರಗಿ: ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಅಲಂ ಖಾನ್ ಅವರ ಅಧ್ಯಕ್ಷತೆಯಲ್ಲಿ ನೂತನ ಕಣ್ಣಿ ಮಾರುಕಟ್ಟೆ ಸಂಕೀರ್ಣ ಉದ್ಘಾಟನೆ ಹಾಗೂ ಅಂಗಡಿಗಳ ವಿತರಣೆ ಕುರಿತು ಉಪಸಮಿತಿ ಸಭೆ ಜರುಗಿತು.ಶಾಸಕ ಅಲ್ಲಮಪ್ರಭು ಪಾಟೀಲ,ಪಾಲಿಕೆ ಆಯುಕ್ತ ಸಿಂಧೆ ಅವಿನಾಶ ಸಂಜೀವನ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಅಮೀನ್ ಅಹ್ಮದ್ ಮುಕ್ತಾರ್ ಅವರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.