
ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಅವರು ಇಂದು ಆರ್.ಟಿ.ನಗರ ವಾರ್ಡ್‌ನ ಗಂಗೇನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿದರು. ಇನ್ನು ಮುಂದೆ ನಿಗದಿತ ಸರ್ಕಾರಿ ಕಚೇರಿಗಳು ಈ ಸಂಕೀರ್ಣದಲ್ಲಿ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

























