ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿರವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಚಿವೆ ರಾಣಿ ಸತೀಶ್, ಕಾರ್ಯಾಧ್ಯಕ್ಷ ವಸಂತ್ ಕುಮಾರ್, ನಂಜಯ್ಯನಮಠ್, ಕೆಪಿಸಿಸಿ ಉಪಾಧ್ಯಕ್ಷ ಕೃಷ್ಣಂರಾಜು, ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್ ಹಾಗೂ ಬೆಂಗಳೂರು ನಗರ ಜಿಲ್ಲಾಧ್ಯಕ್ಷರುಗಳು ಉಪಸ್ಥಿತರಿದ್ದರು.