
ಸರ್ವೋದಯ ದಿನಾಚರಣೆ ಪ್ರಯುಕ್ತ ನಗರದ ಎಂ.ಜಿ. ರಸ್ತೆಯಲ್ಲಿರುವ ಗಾಂಧೀಜಿ ಅವರ ಪ್ರತಿಮೆಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್‌ರವರು ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ರಾಮಚಂದ್ರಗೌಡ, ಮಾಜಿ ಮೇಯರ್ ಜಿ. ಪದ್ಮಾವತಿ, ಕೇಂದ್ರ ನಗರ ಪಾಲಿಕೆ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್, ಜಂಟಿ ಆಯುಕ್ತರಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಇಂಜಿನಿಯರ್ ಸುಗುಣ, ಆರೋಗ್ಯ ಅಧಿಕಾರಿ ಶಿವಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

























