
ನಗರದ ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಸಂಸ್ಥೆ ಆವರಣದಲ್ಲಿ ರೈತರ ಆತ್ಮಹತ್ಯೆಗಳ ತಡೆ ಸಮಿತಿಯ ಪೂರ್ವಭಾವಿ ಸಭೆ ಇಂದು ನಡೆಯಿತು. ಸಭೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ಕೃಷಿ ಸುಧಾರಣಾ ಸಮಿತಿ ಅಧ್ಯಕ್ಷ ದೇವೇಂದ್ರ ಶರ್ಮಾ, ಶಾಸಕ, ಸರ್ಕಾರದ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ರೈತ ನಾಯಕ ಕೆ.ಟಿ. ಗಂಗಾಧರ್, ಮತ್ತಿತರರು ಉಪಸ್ಥಿತರಿದ್ದರು.

























