ಕಲಬುರಗಿ: ನಗರದ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿಂದು ಆಯೋಜಿಸಿದದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವರಾಧ್ಯ ಇಜೇರಿ, ಹೆಚ್ಚುವರಿ ಎಸ್‍ಪಿ ಮಹೇಶ ಮೇಘಣ್ಣನವರ್, ಎಸಿಪಿ ಶಿವನಗೌಡ, ಮಂಜುಳಾ ಪಾಟೀಲ, ಮೊಹಮ್ಮದ್ ಬಷೀರ್ ಅನ್ಸಾರಿ, ಶರಣಪ್ಪ ಹಳಿಮನಿ, ಡಾ.ಆರ್.ಬಿ.ಕೊಂಡಾ ಇದ್ದರು.